ಚಿತ್ರದುರ್ಗ (Chitradurga): ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ (ಸೆ.2) ಮುಂದೂಡಲಾಗಿದೆ.
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ಮುಂದೂಡಿ ಜಾಮೀನು ಅರ್ಜಿ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀ ಪರವಾಗಿ ವಕೀಲ ಕೆ.ಎನ್.ವಿಶ್ವನಾಥಯ್ಯ ಅವರು ಆ.29ರಂದು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಅರ್ಜಿ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡರು.
ಸಂತ್ರಸ್ತ ಬಾಲಕಿಯರನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ಸಂತ್ರಸ್ತ ಬಾಲಕಿಯರ ಪರವಾಗಿ ಹೈಕೋರ್ಟ್ ವಕೀಲ ಶ್ರೀನಿವಾಸ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಹಾಜರಾದರು.
ಸಂತ್ರಸ್ತ ಬಾಲಕಿಯರು ಹಾಗೂ ಅವರ ತಂದೆಯ ಅಭಿಪ್ರಾಯ ಪರಿಗಣಿಸಿ ಶ್ರೀನಿವಾಸ್ ಅವರ ಅರ್ಜಿಯನ್ನು ಪರಿಗಣಿಸಿತು. ತಕರಾರು ಸಲ್ಲಿಕೆಗೆ ಒಂದು ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಲಾಯಿತು.