ಮಂಗಳೂರು: ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಮಿಥುನ್ ರೈ ನೀಡಿರುವ ಹೇಳಿಕೆಗೆ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಮಿಥುನ್ ರೈ ಹೇಳಿಕೆಗೆ ಕಿಡಿಕಾರಿತುವ ಶಾಸಕ ರಘುಪತಿ ಭಟ್, ಉಡುಪಿ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿಲ್ಲ. ಅನಂತೇಶ್ವರ ದೇವಾಲಯದಲ್ಲಿ ಶ್ರೀಕೃಷ್ಣ ಮಠ ನಿರ್ಮಾಣವಾಗಿದೆ. ದೇವಾಲಯಕ್ಕೆ ರಾಮಭೋಜನು ಜಾಗ ಕೊಟ್ಟಿದ್ದಾರೆ . ಇದರ ಬಗ್ಗೆ ದಾಖಲೆ ಇದೆ ಎಂದು ತಿರುಗೇಟು ನೀಡಿದ್ದಾರೆ.
Saval TV on YouTube