ಗುವಾಹಟಿ: ಮುಸ್ಲಿಮರಲ್ಲಿ ಅಪರಾಧ ಪ್ರಮಾಣಗಳು ಹೆಚ್ಚಿವೆ ಎಂದು ಹೇಳುವ ಮೂಲಕ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿವಾದವನ್ನು ಹುಟ್ಟುಹಾಕಿದ್ದಾರೆ.
ಅಜ್ಮಲ್ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ನಾವು (ಮುಸ್ಲಿಮರು) ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂತಹ ಎಲ್ಲಾ ಅಪರಾಧಗಳಲ್ಲಿ ನಂ.1 ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂ.1” ಎಂದು ಹೇಳಿದ್ದಾರೆ.
ಅಲ್ಲದೆ ಅಜ್ಮಲ್ ತಾನು ನೀಡಿರುವ ಹೇಳಿಕೆಯನ್ನು ಒಪ್ಪಿಕೊಂಡಿದ್ದು ನನ್ನ ಹೇಳಿಕೆಯಿಂದ ಯಾವುದೇ ತಪ್ಪಿಲ್ಲ ಎಂದು ಹೇಳಿಕೊಂಡಿದ್ದಾರೆ. ಶಿಕ್ಷಣ ಕೊರತೆಯಿಂದ ಜನ ಈ ರೀತಿಯ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಜ್ಮಲ್ ಹೇಳಿಕೆಗೆ ಖಂಡನೆ
ಇತ್ತ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಮುಸ್ಲಿಂ ಸಂಘಟನೆಗಳ ನಾಯಕರು, ಧಾರ್ಮಿಕ ಗುರುಗಳೇ ಬದ್ರುದ್ದೀನ್ ಅಜ್ಮಲ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.