ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಈ ಕಾರಣಕ್ಕಾಗಿ ನಾನು ಬಿಜೆಪಿಗೆ ನಾನು ಬೆಂಬಲಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ರಾಜಕೀಯ ವಲಯದಲ್ಲಿತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಬಹಿರಂಗವಾಗಿದ್ದು, ಬಿಜೆಪಿಗೆ ಅಧಿಕೃತವಾಗಿ ಬಾಹ್ಯ ಬೆಂಬಲ ಘೋಷಿಸಿದ್ದಾರೆ.
ಮಂಡ್ಯದ ಚಾಮುಂಡೇಶ್ವರಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ನಾಯಕತ್ವವನ್ನು ನಾನು ನಂಬಿದ್ದೇನೆ. ಈ ಕಾರಣಕ್ಕಾಗಿ ಬಿಜೆಪಿ ಬೆಂಬಲಿಸುವುದಾಗಿ ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ನಾಲ್ಕು ವರ್ಷಗಳಿಂದ ತಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿದರು. ನನ್ನ ಹಲವು ಹೋಜನೆಗಳಿಗೆ ಕೇಂದ್ರದಿಂದ ಅಪಾರ ನೆರವು ಸಿಕ್ಕಿದೆ. ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇನೆ. ಬದಲಾವಣೆಗಾಗಿ ನನಗೆ ಇನ್ನಷ್ಟು ಶಕ್ತಿಯ ಅಗತ್ಯವಿದೆ ಎಂದು ಹೇಳಿದರು.