ಮನೆ ರಾಜಕೀಯ ಜೆಡಿಎಸ್ ಅಭ್ಯರ್ಥಿಗೆ ನನ್ನ ಮತ​: ಶಾಸಕ ಜಿ ಟಿ ದೇವೇಗೌಡ

ಜೆಡಿಎಸ್ ಅಭ್ಯರ್ಥಿಗೆ ನನ್ನ ಮತ​: ಶಾಸಕ ಜಿ ಟಿ ದೇವೇಗೌಡ

0

ಮೈಸೂರು(Mysuru): ರಾಜ್ಯಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ. ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​ ಶಾಸಕ ಜಿ ಟಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಶಾಸಕ ಜಿ.ಟಿ. ದೇವೇಗೌಡ ಜೆಡಿಎಸ್​​ ಬಗ್ಗೆ ಅತೃಪ್ತಿ ಹೊಂದಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಆದ್ದರಿಂದ ನಾಳೆ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಯಾರ ಪರ ಮತ ಹಾಕುತ್ತಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.ಇದೀಗ ಅವರೇ ಸ್ಪಷ್ಟನೆ ನೀಡಿದ್ದು, ನಾನು ಜೆಡಿಎಸ್​ನಿಂದ ಅಧಿಕೃತವಾಗಿ ಆಯ್ಕೆಯಾಗಿದ್ದೇನೆ. ಹಾಗಾಗಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಜೆಡಿಎಸ್​ಗೆ ಮತ ಹಾಕುತ್ತೇನೆ ಎಂದಿದ್ದಾರೆ.

ಹೆಚ್ ​​​ಡಿ ಕುಮಾರಸ್ವಾಮಿಯವರು ಕೂಡ ನನ್ನ ಬೆಂಬಲವನ್ನು ಕೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತವನ್ನು ಹಾಕುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ನನ್ನ ಬೆಂಬಲಿಗರು ಹಾಗೂ ಕ್ಷೇತ್ರದ ಮುಖಂಡರ ಅಭಿಪ್ರಾಯವು ಕೂಡ ಅದೇ ಆಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಹಿಂದಿನ ಲೇಖನಆನೇಕಲ್‌ ಪುರಸಭೆಯ ಮೂವರು ಸದಸ್ಯರ ಅನರ್ಹತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌, ಜೂನ್‌ 15ಕ್ಕೆ ಅಂತಿಮ ವಿಚಾರಣೆ
ಮುಂದಿನ ಲೇಖನಅಕ್ರಮ ಹಣ ವರ್ಗಾವಣೆ: ಜೂ.13 ರವರೆಗೆ ಸಚಿವ ಸತ್ಯೇಂದ್ರ ಜೈನ್ ಇಡಿ ವಶಕ್ಕೆ