ಮೈಸೂರು(Mysuru): ಮೈಸೂರು ಮತ್ತು ಚಾಮರಾಜನಗರದ 10 ಮಂದಿ ಸರಗಳ್ಳರನ್ನು ನಗರದ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 50 ಲಕ್ಷಕ್ಕೂ ಹೆಚ್ಚು ಮೌಲ್ಯದ 1ಕೆ.ಜಿ ತೂಕದ 25 ಚಿನ್ನದ ಸರಗಳು, ಇತರೆ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮೈಸೂರು ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂರಿನಲ್ಲಿ ಸರಗಳ್ಳತ ಆಗುತ್ತಿದ್ದ ಹಿನ್ನಲೆ ವಿಶೇಷ ತಂಡ ರಚಿಸಿ ಪೋಲಿಸರು ಕಾರ್ಯಾಚರಣೆ ನಡೆಸಿದ್ದರು. ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಒಟ್ಟು ಸುಮಾರು ೨೫ ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಖದೀಮರು ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.