ಮನೆ ಆರೋಗ್ಯ ಮೈಸೂರು: ಕಲುಷಿತ ನೀರು ಕುಡಿದು 13 ಮಂದಿ ಅಸ್ವಸ್ಥ

ಮೈಸೂರು: ಕಲುಷಿತ ನೀರು ಕುಡಿದು 13 ಮಂದಿ ಅಸ್ವಸ್ಥ

0

ಮೈಸೂರು: ಕೊಳ್ಳೇಗಾಲ ಸಮೀಪದ ಮೂಡುವೇನಹಳ್ಳಿಯಲ್ಲಿ ಪೈಪ್‌ಲೈನ್ ಮೂಲಕ ಸರಬರಾಜು ಮಾಡಲಾಗಿದ್ದ ಕಲುಷಿತ ನೀರು ಸೇವಿಸಿ 13 ಮಂದಿ ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಭಾನುವಾರ ವರದಿಯಾಗಿದೆ.

ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿದ್ದ ಜನರನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕೊಳ್ಳಗಾಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಕೊಳಚೆ ನೀರು ಮತ್ತು ಮಳೆ ನೀರು ಬೋರ್‌ವೆಲ್‌ಗೆ ಸೇರುತ್ತಿದ್ದು, ಇದು ನೀರು ಕಲುಷಿತಗೊಳ್ಳಲು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ನಡುವೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಗ್ರಾಮಕ್ಕೆ ಭೇಟಿ ನೀಡಿ, ಟ್ಯಾಂಕರ್‌ನಲ್ಲಿ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಗಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಲೂ ಸೂಚಿಸಿದರು.

ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಈಗಾಗಲೇ ಚೇತರಿಸಿಕೊಂಡಿದ್ದಾರೆ, ಮೂವರಿಗೆ ಚಿಕಿತ್ಸೆ ಮುಂದುವರೆದಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ನೈರ್ಮಲ್ಯವನ್ನು ಸುಧಾರಿಸಿ ಶುದ್ಧ ನೀರು ಪೂರೈಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.