ಮನೆ ಸುದ್ದಿ ಜಾಲ ಮೈಸೂರು : ₹35 ಲಕ್ಷ ಮೌಲ್ಯದ 173 ಮೊಬೈಲ್‌ಗಳ ಪತ್ತೆ , ಸೈಬರ್ ವಂಚನೆ ಪ್ರಕರಣದಲ್ಲಿ...

ಮೈಸೂರು : ₹35 ಲಕ್ಷ ಮೌಲ್ಯದ 173 ಮೊಬೈಲ್‌ಗಳ ಪತ್ತೆ , ಸೈಬರ್ ವಂಚನೆ ಪ್ರಕರಣದಲ್ಲಿ 3 ಆರೋಪಿಗಳ ಬಂಧನ

0

ಮೈಸೂರು (ಜೂನ್ 3): ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಘಟಕವು ಮಹತ್ವದ ಕಾರ್ಯಾಚರಣೆ ನಡೆಸಿದ್ದು, CEIR (Central Equipment Identity Register) ಪೋರ್ಟಲ್‌ ಸಹಾಯದಿಂದ ಸುಮಾರು ₹35 ಲಕ್ಷ ಮೌಲ್ಯದ 173 ವಿವಿಧ ಕಂಪೆನಿಗಳ ಆಂಡ್ರಾಯ್ಡ್ ಮೊಬೈಲ್‌ಗಳನ್ನು ಪತ್ತೆಹಚ್ಚಿದೆ. ಪತ್ತೆಯಾದ ಮೊಬೈಲ್‌ಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅವರ ಸಮ್ಮುಖದಲ್ಲಿ ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಎನ್ನಲಾಗಿದೆ.

ಈ ಪ್ರಕರಣ ಕುರಿತ್ತಾಗಿ ಇದೇ ವೇಳೆ, 2026ರ ಜನವರಿ 27ರಂದು ದಾಖಲಾಗಿದ್ದ ಸೈಬರ್ ವಂಚನೆ ಪ್ರಕರಣದ ಕುರಿತು ಪೊಲೀಸ್ ಇಲಾಖೆ ಪತ್ರಿಕಾಗೋಷ್ಠಿ ನಡೆಸಿತು. ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಮೂಲಕ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಮಲ್ಲಿಕ್ ಸಿ. ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ಶ್ರೀಕಾಂತ್ ಆರ್. ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ಸಾರ್ವಜನಿಕರ ಕಳೆದುಹೋದ ಮೊಬೈಲ್‌ಗಳನ್ನು ಮರಳಿ ಒದಗಿಸುವುದರ ಜೊತೆಗೆ ಸೈಬರ್ ಅಪರಾಧಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಇಲಾಖೆಯ ಬದ್ಧತೆಯನ್ನು ತೋರಿಸಿದೆ ಎಂದು ತಿಳಿದುಬಂದಿದೆ.