Saval TV on YouTube
ಮೈಸೂರು(Mysuru): ಚಿರತೆ ದಾಳಿಯಿಂದ ಮೃತಪಟ್ಟ ಯುವತಿ ಮೇಘನಾ ಕುಟುಂಬಕ್ಕೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯಾ ತಿಳಿಸಿದರು.
ಕಳೆದ ಮಧ್ಯರಾತ್ರಿ 12ರ ತನಕ ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಈ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಮಾಲತಿ ಪ್ರಿಯಾ, ಮೃತ ಯುವತಿಯ ಕುಟುಂಬಕ್ಕೆ ಏಳೂವರೆ ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಕುಟುಂಬದ ಓರ್ವರಿಗೆ ಹೊರಗುತ್ತಿಗೆ ಆಧಾರದಲ್ಲಿ ಮೇಲೆ ಕೆಲಸ ನೀಡುತ್ತೇವೆ ಎಂದರು.
ಚಿರತೆ ಹಾವಳಿ ನಿಯಂತ್ರಿಸಲು ತಿ.ನರಸೀಪುರ ತಾಲ್ಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡುತ್ತೇವೆ. ಚಿರತೆ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ಹಾವಳಿ ತಪ್ಪಿಸಲು ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.