ಮೈಸೂರು(Mysuru): ನಗರದ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪರಸಪ್ಪ ಕೊನ್ನೂರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಈತ ತನ್ನ ಹೆಂಡತಿ ವಾಯುವಿಹಾರಕ್ಕೆ ತೆರಳಿದ್ದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಕರ್ನಾಟಕ ಮೂಲದ ಪರಸಪ್ಪ ಅವರು ಮೈಸೂರು ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, 2016ನೇ ಬ್ಯಾಚಿನಲ್ಲಿ ಆಯ್ಕೆಗೊಂಡಿದ್ದರು. ಸದ್ಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ತನಿಖೆಯ ನಂತರವಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ನಜರಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.