ಮನೆ ಅಪರಾಧ ಮೈಸೂರು: ಪ್ರೊಫೆಸರ್ ವಿರುದ್ಧ ದೈಹಿಕ, ಮಾನಸಿಕ ಕಿರುಕುಳ, ಜಾತಿ ನಿಂದನೆ ಪ್ರಕರಣ ದಾಖಲಿಸಿದ ವಿದ್ಯಾರ್ಥಿನಿ

ಮೈಸೂರು: ಪ್ರೊಫೆಸರ್ ವಿರುದ್ಧ ದೈಹಿಕ, ಮಾನಸಿಕ ಕಿರುಕುಳ, ಜಾತಿ ನಿಂದನೆ ಪ್ರಕರಣ ದಾಖಲಿಸಿದ ವಿದ್ಯಾರ್ಥಿನಿ

0

ಮೈಸೂರು: ಪ್ರೊಫೆಸರ್​ ವಿರುದ್ಧ ದೈಹಿಕ, ಮಾನಸಿಕ ಕಿರುಕುಳ ಹಾಗು ಜಾತಿ ನಿಂದನೆ ಆರೋಪಗಳನ್ನು ಮಾಡಿರುವ ಪಿಹೆಚ್ ​ಡಿ ವಿದ್ಯಾರ್ಥಿನಿಯೊಬ್ಬರು ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಿಸಿದ್ದಾರೆ.

Join Our Whatsapp Group

ಮೈಸೂರು ವಿಶ್ವವಿದ್ಯಾನಿಲಯದ ಮೈಕ್ರೋ ಬಯೋಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮೈಸೂರಿನ ನಿವಾಸಿ 29 ವರ್ಷದ ಪಿಹೆಚ್‌ ಡಿ ವಿದ್ಯಾರ್ಥಿನಿ ದೂರು ನೀಡಿದ್ದಾರೆ.

ದೂರಿನ ವಿವರ: ಪ್ರೊ.ಶುಭ ಗೋಪಾಲ್ ಮಾರ್ಗದರ್ಶನದಲ್ಲಿ ರಿಸರ್ಚ್‌ ಸ್ಕಾಲರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಪ್ರೊಫೆಸರ್ ನನಗೆ ದೈಹಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೇ ಜಾತಿ ನಿಂದನೆ ಮಾಡಿದ್ದಾರೆ. ಫೆಲೋಶಿಪ್ ಬಿಲ್‌ ಗೆ ಸಹಿ ಮಾಡಲು ನನ್ನಿಂದ ಉಡುಗೊರೆಗಳನ್ನು ತರಿಸಿಕೊಳ್ಳುತ್ತಿದ್ದರು. ಪಂಚತಾರಾ ಹೋಟೆಲ್‌ ಗಳಿಗೆ ಕರೆದುಕೊಂಡು ಹೋಗಿ ನನ್ನ ಹಣದಿಂದಲೇ ಬಿಲ್ ಪಾವತಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೆ ಅವರು ದೂರನ್ನು ವಾಪಸ್ ತೆಗೆದುಕೊಂಡು ಮಾರ್ಗದರ್ಶಕರನ್ನು ಬದಲಾಯಿಸಿಕೊಳ್ಳುವಂತೆ ನನಗೆ ಒತ್ತಡ ಹೇರಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಹಿಂದಿನ ಲೇಖನಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು: ಎಂ ಬಿ ಪಾಟೀಲ
ಮುಂದಿನ ಲೇಖನಮೈಸೂರು: ಬೈಕ್‌ ನಿಂದ ಕೆಳಗೆ ಬಿದ್ದು ಸವಾರ ಸಾವು