Saval TV on YouTube
ಮೈಸೂರು(Mysuru): ಡಿಪೋ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಹಿಳೆ ಮಚ್ಚು ಹಿಡಿದು ಬಂದಿರುವ ಘಟನೆ ನಗರದ ಸಾತಗಳ್ಳಿ ಬಸ್ ಡಿಪೋನಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ಶಫಿ ಪತ್ನಿ ಕೃತ್ಯವೆಸಗಿದ ಆರೋಪಿ ಎನ್ನಲಾಗಿದೆ.
ಬಸ್ ಡಿಪೋ ಜಾಗವನ್ನು ಕಾಂಗ್ರೆಸ್ ಮುಖಂಡ ಶಫಿ ಬಾಡಿಗೆಗೆ ಪಡೆದು ಕಾಲೇಜು ನಡೆಸುತ್ತಿದ್ದ. 1 ಕೋಟಿ 80 ಲಕ್ಷ ಬಾಡಿಗೆ ಬಾಕಿ ಆರೋಪ ಮಾಡಲಾಗಿದೆ. ಬಾಡಿಗೆ ಕಟ್ಟದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಡಿಪೋ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಇದರಿಂದ ಆಕ್ರೋಶಗೊಂಡು ಮಚ್ಚು ಹಿಡಿದು ಶಫಿ ಹಾಗೂ ಆತನ ಪತ್ನಿ ಡಿಪೋಗೆ ಬಂದು, ಅಧಿಕಾರಿಗಳ ಮುಂದೆ ರಂಪಾಟ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿದಲ್ಲದೇ ಅಧಿಕಾರಿಗೆ ದಂಪತಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ದಂಪತಿಯ ರಂಪಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಸದ್ಯ ದಂಪತಿ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.