ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಿಳಿಗಿರೆ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು 19 ರಿಂದ 35 ವರ್ಷಗೊಳಗಿನವರಾಗಿರಬೇಕು, ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಪಿಯುಸಿ ತೇರ್ಗಡೆ ಹೊಂದಿರಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಎಸ್.ಎಲ್.ಎಲ್.ಸಿ/ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಲ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಆಸಕ್ತ ಅರ್ಹ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್ಸೈಟ್ ಮೂಲಕ ಅಕ್ಟೋಬರ್ 19 ರೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂ: 08221-297171 ಅನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














