ಮೈಸೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 21 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಿಗೆ 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಇಂಗ್ಲೀಷ್ ಭಾಷೆ ಬೋಧಿಸುವ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಇಂಗ್ಲೀಷ್ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯಲ್ಲಿ ತಮ್ಮ ವಿದ್ಯಾರ್ಹತೆ ಹಾಗೂ ಸ್ವವಿವರಗಳೊಂದಿಗೆ ಪಡುವಾರಹಳ್ಳಿಯ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿಗೆ ಆಗಸ್ಟ್ 16 ರೊಳಗೆ ಸಲ್ಲಿಸಬೇಕು.
Saval TV on YouTube