ಮೈಸೂರು: 10 ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್ (23) ಮಂಚಳ್ಳಿಹುಂಡಿಯ ಶಿವಾನಂದ (21) ಬಂಧಿತ ಆರೋಪಿಗಳು.
ಬಂಧಿತರಿಂದ ಆಟೋ ಹಾಗೂ ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರು ಜನರ ಆರೋಪಿಗಳ ತಂಡ ನಿರಂತರವಾಗಿ ಮೈಸೂರು ಗ್ರಾಮಾಂತರದಲ್ಲಿ ಕಳ್ಳತನ ಮಾಡುತ್ತಿತ್ತು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.
ಇವರ ವಿರುದ್ಧ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಇನ್ನು ಉಳಿದ ನಾಲ್ವರ ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ.
Saval TV on YouTube