ಮನೆ ಅಪರಾಧ ಮೈಸೂರು: ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಹಲ್ಲೆ- ಪ್ರಕರಣ ದಾಖಲು

ಮೈಸೂರು: ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಹಲ್ಲೆ- ಪ್ರಕರಣ ದಾಖಲು

0

ಮೈಸೂರು: ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಖ್ಯಾತೆ ತೆಗೆದ ವ್ಯಕ್ತಿಯೋರ್ವ  ಸರ್ಕಾರಿ ಅಭಿಯೋಜಕರ ಮೇಲೆ ಹಲ್ಲೆ ನಡೆಸಿದ ಘಟನೆ ಕೆ.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

Join Our Whatsapp Group

ಹುಣಸೂರು-ಪಿರಿಯಾಪಟ್ಟಣದಲ್ಲಿ ಪ್ರಭಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಭಿಯೋಜಕರ ಶಿವಪ್ರಸಾದ್ ಗಾವಂಕರ್ ಹಲ್ಲೆಗೆ ಒಳಗಾದವರು. ಕಿರಣ್ ಕೌಶಿಕ್ ಹಲ್ಲೆ ನಡೆಸಿದವನು.

ಆರೋಪಿ ವಿರುದ್ಧ  ಕ್ರಮ ಕೈಗೊಳ್ಳುವಂತೆ ಶಿವಪ್ರಸಾದ್ ಗಾವಂಕರ್ ಘಟನೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹುಣಸೂರಿನ ಅಧಿಕ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ 2 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಕ್ಕೆ 12 ಮಂದಿ ಆರೋಪಿಗಳಾಗಿದ್ದು, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ ಕೌಶಿಕ್ ಶಿವಪ್ರಸಾದ್ ಗಾವಂಕರ್ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಆರೋಪಿಗಳ ಕುಮ್ಮಕ್ಕಿನಿಂದ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಶಿವಪ್ರಸಾದ್ ಗಾವಂಕರ್ ತಿಳಿಸಿದ್ದಾರೆ.

ಹಿಂದಿನ ಲೇಖನಲೋಕಸಭೆ ಚುನಾವಣೆ: 12 ಭಾಷೆಗಳಲ್ಲಿ ಚುನಾವಣಾ ಪ್ರಚಾರ ಗೀತೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ
ಮುಂದಿನ ಲೇಖನಬಿಡದಿ ತೋಟದ ಮನೆಯಿಂದ ಮದ್ಯ, ಬಾಡೂಟದ ಘಮಲು ಹೊರಬರುತ್ತಿದೆಯಂತೆ: ಕಾಂಗ್ರೆಸ್‌ ಆರೋಪ