ಮೈಸೂರು: ಮೈಸೂರು ಚಲೋ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ. ವೈ. ವಿಜಯೇಂದ್ರ ಅವರು ಪತ್ನಿ ಸಮೇತ ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ ಹಗರಣಗಳ ವಿರುದ್ಧ ಪಾದಯಾತ್ರೆ ಆರಂಭಿಸುತ್ತಿದ್ದು, ಪಾದಯಾತ್ರೆಗೂ ಮುನ್ನ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಿ.ವೈ ಬಿಜಯೇಂದ್ರ, ದೇವಿಗೆ ಪ್ರಾರ್ಥನೆ ಮಾಡಿದರು. ಈ ವೇಳೆ, ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.
ಇಂದು ಬೆಳಗ್ಗೆ ಕೇಂಗೇರಿ ಕೆಂಪಮ್ಮ ದೇವಸ್ಥಾನದ ಸಮೀಪದ ಮಂಜುನಾಥ ಕನ್ವೆನ್ಷನ್ ಹಾಲ್ ಬಳಿಯಿಂದ ಪಾದಯಾತ್ರೆ ಆರಂಭವಾಗಲಿದ್ದು, ಬಿ.ಎಸ್. ಯಡಿಯೂರಪ್ಪ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರು ಚಾಲನೆ ಕೊಡಲಿದ್ದಾರೆ. ಕೆಂಗೇರಿಂದ ಹೊರಟು ಮೈಸೂರುವರೆಗೆ 8 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ.
ಇದೀಗ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿರುವ ಬಿ.ವೈ. ವಿಜಯೇಂದ್ರ ಅವರು, ಕೆಂಗೇರಿಗೆ ತೆರಳಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.