Saval TV on YouTube
ಮೈಸೂರು(Mysuru): ಪ್ರಾಣಾಯಾಮ ಮಾಡುತ್ತಾ ಉರಿಬಿಸಿಲಿನಲ್ಲೇ ಬರಿಗಣ್ಣಿನಲ್ಲಿ ಸೂರ್ಯನನ್ನು 42 ನಿಮಿಷಗಳ ಕಾಲ ನೋಡುವ ಮೂಲಕ ಬದರಿ ನಾರಾಯಣ್ ಅವರು ದಾಖಲೆ ಬರೆದಿದ್ದಾರೆ.
ಮಂಗಳವಾರ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಈ ದಾಖಲೆ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕ್ರಿಯೆಗೆ ಸೂರ್ಯ ಕಿರಣ ಕ್ರಿಯೆ ಎಂದು ಹೇಳುತ್ತೇವೆ. ಸೂರ್ಯನನ್ನು ನೇರವಾಗಿ ನೋಡುವುದು ಅಪಾಯಕಾರಿ. ಆದರೆ, ನಿರಂತರ ಪ್ರಾಣಾಯಾಮದ ಜೊತೆಗಿನ ಅಭ್ಯಾಸದ ಮೂಲಕ ನಾನು ಈ ಸಾಧನೆ ಮಾಡಿದ್ದೇನೆ. ಹೀಗಾಗಿ ಇದನ್ನು ಯಾರೂ ಪ್ರಯತ್ನಿಸಬಾರದು ಎಂದು ಮನವಿ ಮಾಡಿದ್ದಾರೆ.
ಯೋಗ ಗುರು ಕೆ.ರಾಘವೇಂದ್ರ ಪೈ ಮಾತನಾಡಿ, ಈ ಯೋಗಕ್ಕೆ ತ್ರಾಟಕ ಕ್ರಿಯೆ ಎನ್ನುತ್ತಾರೆ. ಇದನ್ನು ಹಠ ಯೋಗಿಗಳು ಮಾತ್ರ ಸಾಧಿಸಲು ಸಾಧ್ಯ ಎಂದರು.