ಮನೆ ಸ್ಥಳೀಯ ಮೈಸೂರು: ಭವಾನಿ ರೇವಣ್ಣ ಕಾರಿಗೆ ಬೈಕ್‌ ಡಿಕ್ಕಿ- ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ ?...

ಮೈಸೂರು: ಭವಾನಿ ರೇವಣ್ಣ ಕಾರಿಗೆ ಬೈಕ್‌ ಡಿಕ್ಕಿ- ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ ? ಎಂದು ಹಿಗ್ಗಾಮುಗ್ಗಾ ಕ್ಲಾಸ್

0


ಮೈಸೂರು: ಬೈಕ್‌ ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ ಭವಾನಿ ರೇವಣ್ಣ ಅವರು ಬೈಕ್‌ ಸವಾರನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ.

ಭವಾನಿ ಅವರು ಕಾರಿನಿಂದ ಕೆಳಗಿಳಿದು ಬಂದು ಬೈಕ್ ಸವಾರನ ಆರೋಗ್ಯ ವಿಚಾರಿಸುವ ಬದಲಿಗೆ ಹಿಗ್ಗಾಮುಗ್ಗಾ ಬೈದದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ಟು ಹಾಕ್ರೋ ಈ ಗಾಡಿನ ಎಂದು ಬೈಕ್‌ ಸವಾರನಿಗೆ ತರಾಟೆಗೆ ತೆಗೆದುಕೊಂಡರು.

ವಾಹನದ ಮುಂಭಾಗ ಡ್ಯಾಮೇಜ್‌ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್‌ ಸವಾರನ ಮೊಬೈಲ್‌ ಕಸಿದುಕೊಂಡು ಬೈಕ್‌ ಕೀ ಕಿತ್ತುಕೊಂಡರು. ” ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?
ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು.

ಎಂದು ಕೇಳಿದರು. ಅಲ್ಲದೇ, ‘ಬಿಟ್‌ ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವನು (ಬೈಕ್‌ ಸವಾರ) ಸತ್ತೋಯ್ತಾನೆ ಅಂತ ಅವನ ಬಗ್ಗೆ ಯೋಚೆ ಮಾಡ್ತಾ ಇದ್ದೀಯಲ್ಲಾ, ಒಂದೂವರೆ ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?’ ಎಂದೂ ಸ್ಥಳೀಯರ ವಿರುದ್ಧ ಭವಾನಿ ರೇವಣ್ಣ ಕಿಡಿಕಾರಿದರು.

ಇದು ಯಾವ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುತ್ತೆ. ಗಾಡಿ ಸೀಜ್‌ ಮಾಡಿಸು. ಈ ಗ್ರಾಮ ಎಸ್‌ ಐ ಬರೋಕೆ ಹೇಳಿ ಎಂದು ಭವಾನಿ ರೇವಣ್ಣ ಅವರೇ ಬೈಕ್‌ ಸವಾರ ಮತ್ತು ಹಿಂಬದಿ ಸವಾರನ ಫೋಟೋವನ್ನು ಕ್ಲಿಕ್ಕಿಸುತ್ತಿರುವ ವಿಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲು
ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬೈಕ್‌ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.