ಮೈಸೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೀದಿಗಿಳಿದಿದ್ದು, ಮೈಸೂರಿನಲ್ಲಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ,ಮಾಜಿ ಶಾಸಕರಾದ ಹರ್ಷವರ್ಧನ್, ನಾಗೇಂದ್ರ, ಕೋಟೆ ಶಿವಣ್ಣ, ಮಾಜಿ ಸಚಿವ ಸಿ ಹೆಚ್ ವಿಜಯ್ ಶಂಕರ್, ಮೇಯರ್ ಶಿವಕುಮಾರ್, ಉಪಮೆಯರ್ ರೂಪ, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಡಾ.ರೇವಣ್ಣ, ಮಹದೇವಯ್ಯ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.