ಮೈಸೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಸದಂತೆ ಸರ್ಕಾರದ ಅಧೀನ ಕಾರ್ಯದರ್ಶಿ (ಧಾರ್ಮಿಕ ದತ್ತಿ) ಕೆ.ಪಿ. ಹನುಮಂತರಾಜು ಸುತ್ತೋಲೆ ಹೊರಡಿಸಿದ್ದಾರೆ.
ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿದೆ. ಮೊಬೈಲ್ ಬಳಕೆಯಿಂದ ಬರುವ ಶಬ್ದಗಳಿಂದ ದೇವಾಲಯದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರು ಧ್ಯಾನ ಮತ್ತು ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.
ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.
Saval TV on YouTube