ಮನೆ ರಾಜ್ಯ ಮೈಸೂರು ಚಾಮುಂಡೇಶ್ವರಿ ಕ್ಷೇತ್ರ: ಇವಿಎಂ ಒಡೆದು ಹಾಕಿದ ಮತದಾರ- ಪ್ರಕರಣ ದಾಖಲು

ಮೈಸೂರು ಚಾಮುಂಡೇಶ್ವರಿ ಕ್ಷೇತ್ರ: ಇವಿಎಂ ಒಡೆದು ಹಾಕಿದ ಮತದಾರ- ಪ್ರಕರಣ ದಾಖಲು

0

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹೂಟಗಳ್ಳಿ ಸರ್ಕಾರಿ ಪ್ರೌಢ ಶಾಲೆ ಮತಗಟ್ಟೆಗೆ ಮತ ಚಲಾಯಿಸಲು ಬಂದಿದ್ದ ವ್ಯಕ್ತಿ ಇವಿಎಂ– ಕಂಟ್ರೋಲ್ ಯೂನಿಟ್ ಒಡೆದು ಹಾಕಿರುವ ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿದೆ.

Join Our Whatsapp Group

ಹೂಟಗಳ್ಳಿ ನಿವಾಸಿ ಶಿವಮೂರ್ತಿ ಎಂಬುವರು ಮೇ 10ರ ಬುಧವಾರ ಸಂಜೆ 4.15ರ ಸುಮಾರು ಮತ ಚಲಾಯಿಸಲು ಬಂದಿದ್ದರು. ಗುರುತಿನ ಚೀಟಿ ಸಿಬ್ಬಂದಿಗೆ ನೀಡಿದ ನಂತರ ಏಕಾಏಕಿ ವಿದ್ಯುನ್ಮಾನ ಮತಯಂತ್ರದ ಕಂಟ್ರೋಲ್ ಯೂನಿಟ್ ಅನ್ನು ಎರಡು ಬಾರಿ ನೆಲಕ್ಕೆ ಹಾಕಿ ಒಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು.

ಮತಗಟ್ಟೆ ಅಧಿಕಾರಿ ಎಂ.ಜಿ.ಕುಮಾರ ಅವರು ನೀಡಿದ ದೂರಿನ ಮೇಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತಗಟ್ಟೆಯಲ್ಲಿ 912 ಮತದಾರರು ಇದ್ದು, ಆ ವೇಳೆ 553 ಮಂದಿ ಮತ ಚಲಾಯಿಸಿದ್ದರು. ಹೊಸ ಕಂಟ್ರೋಲ್ ಯೂನಿಟ್ ಅಳವಡಿಸಿ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು ಎಂದು ಚುನಾವಣಾಧಿಕಾರಿ ತಿಳಿಸಿದರು.

ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದು, ತಿಳಿಹೇಳಿದ್ದೆವು. ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ವಿಜಯನಗರ ಪೊಲೀಸರು ಮಾಹಿತಿ ನೀಡಿದರು.