ಮೈಸೂರು: ಕೆಲಸ ಮಾಡುವಾಗ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಯಡಹಳ್ಳಿ ಗ್ರಾಮದ ಬಳಿ ನಡೆದಿದೆ.
ಸತೀಶ್ (52) ಮೃತ ಚೆಸ್ಕಾಂ ಸಿಬ್ಬಂದಿ.
ಇವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ನಿವಾಸಿಯಾಗಿದ್ದು, 24 ವರ್ಷದಿಂದ ಚೆಸ್ಕಾಂನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಇನ್ನು ಮೇಲಾಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸತೀಶ್ ಕುಟುಂಬದವರು ಆರೋಪಿಸಿದ್ದು, ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Saval TV on YouTube