ಮನೆ ಸ್ಥಳೀಯ ಮೈಸೂರು ದಸರಾ ಮಹೋತ್ಸವ: ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು ದಸರಾ ಮಹೋತ್ಸವ: ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ

0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕೃತವಾಗಿ ಆಹ್ವಾನಿಸಿದರು.

ಬುಧವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.

ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಹಿಂದಿನ ಲೇಖನಡಿಕೆಶಿ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’: ಕಾಂಗ್ರೆಸ್’ಗೆ ಜೆಡಿಎಸ್ ತಿರುಗೇಟು
ಮುಂದಿನ ಲೇಖನಡಿಕೆಶಿ ಟಾರ್ಗೆಟ್ ಪಾಲಿಟಿಕ್ಸ್: ಆರ್ ಆರ್ ನಗರದ ಶಾಸಕ ಮುನಿರತ್ನ ಧರಣಿ