ಮೈಸೂರು: ಪರವಾನಗಿ ಪಡೆಯದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಮೈಸೂರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕಾರ್ಯ ಪಡೆ (ಟಾಸ್ಕ್ ಫೋರ್ಸ್) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವ ಬಾಲಕಾರ್ಮಿಕ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಆಚರಿಸಬೇಕು. ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರನ್ವಯ ಕಲಂ 17 ರಡಿ ನೇಮಕಗೊಂಡಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಬಾಲಕಾರ್ಮಿಕರ ತಪಾಸಣೆಗೆ ಗುರಿ ನಿದಗಿಪಡಿಸಿ, ಕಡ್ಡಾಯವಾಗಿ ಬಾಲಕಾರ್ಮಿಕರ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲು ಸೂಚಿಸಿದರು.














