ಮನೆ ರಾಜ್ಯ ಮೈಸೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಪರಿಶೀಲಿಸಿದ ಡಿಸಿ ಕೆ.ವಿ.ರಾಜೇಂದ್ರ

ಮೈಸೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಪರಿಶೀಲಿಸಿದ ಡಿಸಿ ಕೆ.ವಿ.ರಾಜೇಂದ್ರ

0

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾ ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಆರಂಭಿಸಲಾಗಿದೆ.

ಸಿದ್ದಾರ್ಥನಗರದ ನೂತನ ಜಿಲ್ಲಾಧಿಕಾರಿ ಕಚೇರಿಗಳ ಸಂಕೀರ್ಣದ ಸಮೀಪದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತಯಂತ್ರಗಳ ಭದ್ರತಾ ಕೊಠಡಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ.

ಪರಿಶೀಲನೆ ನಡೆಸುವ ಕಾರ್ಯವನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಶನಿವಾರ ವೀಕ್ಷಿಸಿದರು.

ಮಾರ್ಗಸೂಚಿ ಪಾಲಿಸುವಂತೆ ಹಾಗೂ ಲೋಪವಾಗದಂತೆ ನೋಡಿಕೊಳ್ಳುವಂತೆ ನಿಯೋಜಿತ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಕೇಂದ್ರದ ಬಳಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಚುನಾವಣಾ ತಹಶೀಲ್ದಾರ್ ರಾಮ್‌ ಪ್ರಸಾದ್ ಇದ್ದರು.