ಮನೆ ರಾಜ್ಯ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ನೇಮಕ

ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ನೇಮಕ

0

ಮೈಸೂರು(Mysuru): ಮೈಸೂರಿನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ವರ್ಗಾವಣೆ ಮಾಡಲಾಗಿದ್ದು,  ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ‌ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ‌‌ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಡಾ. ಕೆ ವಿ ರಾಜೇಂದ್ರ  ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ದಿವ್ಯ ಪ್ರಭು ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ ಅವರನ್ನು ಪಶು ಸಂಗೋಪನ ಇಲಾಖೆಯ ನಿರ್ದೇಶಕರಾಗಿ ನೇಮಕ ಮಾಡಿದೆ.


ಮಂಡ್ಯ  ಜಿಲ್ಲಾಧಿಕಾರಿಯಾಗಿ  ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.
ಇವರನ್ನು ಸೇರಿದಂತೆ ರಾಜ್ಯದ 21 ಐಎಎಸ್  ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಲೇಖನರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆ ನಡೆಸುವ ಯೋಗ್ಯತೆ ಇಲ್ಲ: ಡಿ.ಕೆ ಶಿವಕುಮಾರ್‌
ಮುಂದಿನ ಲೇಖನದ್ವೇಷ ಭಾಷಣ: ಧರ್ಮ ನೋಡದೆ ಸ್ವಯಂಪ್ರೇರಿತವಾಗಿ ಕ್ರಮಕೈಗೊಳ್ಳಲು ದೆಹಲಿ, ಉತ್ತರಾಖಂಡ, ಯುಪಿ ಪೊಲೀಸರಿಗೆ ಸುಪ್ರಿಂ ಆದೇಶ