ಮನೆ ಸುದ್ದಿ ಜಾಲ ಮೈಸೂರು: ಇವಿಎಂ , ವಿ.ವಿ.ಪ್ಯಾಟ್ ಕುರಿತು ಪ್ರಾತ್ಯಕ್ಷತೆ

ಮೈಸೂರು: ಇವಿಎಂ , ವಿ.ವಿ.ಪ್ಯಾಟ್ ಕುರಿತು ಪ್ರಾತ್ಯಕ್ಷತೆ

0

ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪಂಚಾಯತ್ ದೇವರಾಜ ಅರಸ್ ಸಭಾಂಗಣದಲ್ಲಿ ವಿದ್ಯುನ್ಮಾನ ಮತಯಂತ್ರ ತರಬೇತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು, ಮಾಧ್ಯಮ ಪ್ರತಿನಿಧಿಗಳಿಗೆ ಮತ ಚಲಾಯಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಅವರು ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರದ ಕಾರ್ಯ ವೈಖರಿ ಕುರಿತು ಪ್ರಾತ್ಯಕ್ಷಿಕೆ ನಡೆಸಲಾಗುವುದು. ಈ ಪ್ರಾತ್ಯಕ್ಷಿಯಲ್ಲಿ ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದ್ದು, ಈ ಪ್ರಾತ್ಯಕ್ಷತೆ ಯುವ ಮತದಾರರಿಗೆ ಹಾಗೂ ಮೊದಲ ಬಾರಿಗೆ ಮತದಾನ ಮಾಡುವಂತಹವರಿಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ, ಮೂಡಾ ಆಯುಕ್ತರಾದ ದಿನೇಶ್, ಜೆ.ಡಿ.ಎಸ್ ಪಕ್ಷದ ನಗರ ಉಪಾಧ್ಯಕ್ಷರಾದ ಫಾಲ್ಕಾನ್ ಬೋರೇಗೌಡ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಉತ್ತನಹಳ್ಳಿ ಶಿವಣ್ಣ, ಬಿ.ಜೆ.ಪಿ ಪಕ್ಷದ ಪಾಪಣ್ಣ, ಬಿ.ಎಸ್.ಪಿ ಪಕ್ಷದ ಚಂದ್ರಶೇಖರ್ ಹಾಗೂ ಇತರರು ಉಪಸ್ಥಿತರಿದ್ದರು.