ಮೈಸೂರು: ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ (ಡಿಎಚ್ಒ) ಡಾ.ಪಿ.ಸಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಮಾರಸ್ವಾಮಿ ಅವರು ಚಿತ್ರದುರ್ಗದ ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯಾಧಿಕಾರಿಯಾಗಿದ್ದರು. ಅವರನ್ನು ಡಾ.ಕೆ.ಎಚ್.ಪ್ರಸಾದ್ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ. ಪ್ರಸಾದ್ ಅವರು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆಯುಕ್ತರಲ್ಲಿ ಮುಂದಿನ ಸ್ಥಳದ ನಿಯುಕ್ತಿಗಾಗಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಹೇಳಿದೆ.
ಡಾ.ಕೆ.ಎಚ್.ಪ್ರಸಾದ್ ಅವರು 2021ರ ಜೂನ್ನಲ್ಲಿ ಕೋವಿಡ್ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
Saval TV on YouTube