ಮನೆ ಸ್ಥಳೀಯ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

0

ಮೈಸೂರು: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2024ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 3 ರಿಂದ 11ರವರೆಗೆ   “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024”ನ್ನು ಹಳೆ ಡಿ.ಸಿ. ಕಚೇರಿ ಎದುರು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು.

Join Our Whatsapp Group

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ   ರೂ.1000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಅಂದರೆ https://kpp.karnataka.gov.inನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.  ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್ 30 ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ.