ಮೈಸೂರು: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು.
ಸ್ಥಳಕ್ಕೆ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.