ಮನೆ ಸುದ್ದಿ ಜಾಲ ಮೈಸೂರು: ನ.4 ರಂದು ನೂತನ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭ

ಮೈಸೂರು: ನ.4 ರಂದು ನೂತನ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭ

0

ಮೈಸೂರು(Mysuru): ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ವಿಜಯನಗರದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ನ.4 ರಂದು ಬೆಳಿಗ್ಗೆ 10.15ಕ್ಕೆ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಎಂ.ಕೆ.ಪೋತರಾಜು ತಿಳಿಸಿದರು.

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗ ಸಂಘವು ಮೈಸೂರಿನಲ್ಲಿ 1963ನೇ ವರ್ಷದಿಂದಲೂ ನಮ್ಮ ಸಮಾಜದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ವಿದ್ಯಾರ್ಥಿ ನಿಲಯವನ್ನು ನಡೆಸಿಕೊಂಡು ಬರುತ್ತಿದೆ. ಪ್ರತಿ ವರ್ಷ ವಿದ್ಯಾರ್ಥಿನಿಲಯದಲ್ಲಿ ಸುಮಾರು 100 ಬಡ ಮಕ್ಕಳಿಗೆ ಉಚಿತವಾಗಿ ಊಟ ಮತ್ತು ವಸತಿಯ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು, ವಿದ್ಯಾವಂತರಾಗುವಂತೆ ಮಾಡಿ, ಅವರ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಸಹಾಯಮಾಡಿದೆ ಎಂದು ತಿಳಿಸಿದರು.

ಇತ್ತೀಚಿಗೆ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದ ಪ್ರವೇಶವನ್ನು ಬಯಸಿ ಬರುತ್ತಿರುವುದರಿಂದ ಸದರಿ ವಿದ್ಯಾರ್ಥಿನಿಲಯದಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಸ್ಥಳಾವಕಾಶವನ್ನು ಒದಗಿಸಲು ಸಾಧ್ಯವಾಗದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು(ಮೂಡಾ) ಮೈಸೂರು ನಗರದ ವಿಜಯನಗರ 3ನೇ ಹಂತದಲ್ಲಿ ನಮ್ಮ ಸಂಘಕ್ಕೆ ಮಂಜೂರು ಮಾಡಿರುವ 100×200 ಆಳತೆಯ ನಿವೇಶನದಲ್ಲಿ ನಮ್ಮ ಜನಾಂಗದ ಸಹೃದಯ ದಾನಿಗಳ ಸಹಾಯದಿಂದ ಸುಸಜ್ಜಿತ ನೂತನ ವಿದ್ಯಾರ್ಥಿ ನಿಲಯವನ್ನು ನಿರ್ಮಾಣ ಮಾಡಿದ್ದೇವೆ ಎಂದು ತಿಳಿಸಿದರು.

ಹಿಂದಿನ ಲೇಖನಸಿಜೆಐ ಆಗಿ ನ್ಯಾ. ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಸ್ವೀಕರಿಸದಂತೆ ತಡೆಕೋರಿದ್ದ ಅರ್ಜಿ ವಜಾ
ಮುಂದಿನ ಲೇಖನಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿ: 12 ಮಂದಿ ಆರೋಪಿಗಳ ಗಡಿಪಾರು