ಮೈಸೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಎರಡನೇ ಹಂತದ ತರಬೇತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಿರಿಯಾಪಟ್ಟಣ, ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಡಿದ ಜಿಲ್ಲಾಧಿಕಾರಿಗಳು ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿಯನ್ನು ನೀಡಲಾಗುತ್ತಿದ್ದು ಯಾವುದೇ ಗೊಂದಲ ಇದ್ದರೂ ಪರಿಹರಿಸಿಕೊಳ್ಳಿ ಎಂದು ಅವರು ಅವರು ತಿಳಿಸಿದರು.
ಏಪ್ರಿಲ್ 25 ಹಾಗೂ 26 ರಂದು ಮುಖ್ಯವಾಗಿ ಕಾರ್ಯನಿರ್ವಹಿಸಬೇಕಿರುವ ಅಂಶಗಳನ್ನು ಪಟ್ಟಿ ಮಾಡಿಕೊಂಡು ಮನನ ಮಾಡಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶೇಖರ್ , ಚಾಮರಾಜ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ವೆಂಕಟರಾಜು ಹಾಗೂ ಚುನಾವಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು