ಮನೆ ರಾಜ್ಯ ಮೈಸೂರು: ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಪರಿಶೀಲನೆ

ಮೈಸೂರು: ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಪರಿಶೀಲನೆ

0

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಅವರು ಮೈಸೂರು ತಾಲ್ಲೂಕಿನ ಹಳೇ ಉಂಡವಾಡಿ ಗ್ರಾಮದ ಬಳಿ ಪ್ರಗತಿಯಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಇಂದು ಪರಿಶೀಲಿಸಿದರು.

Join Our Whatsapp Group

ಹಳೇ ಉಂಡವಾಡಿ ಸಮೀಪ ನಿರ್ಮಿಸುತಿರುವ ಮೂಲಸ್ಥಾವರ, ಮೇಗಳಾಪುರ ಸಮೀಪ ನಿರ್ಮಿಸುತ್ತಿರುವ ಜಲ ಶುಧ್ಧೀಕರಣ ಘಟಕ ಮತ್ತು ಕೊಳವೆ ಮಾರ್ಗ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ, ಪ್ರಗತಿ ಕುರಿತು ಅಧಿಕಾರಿಗಳೊಡನೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಜಗನ್ನಾಥ್ ಮೂರ್ತಿ ಅವರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ಪ್ರದೀಪ್, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಅಭಿಯಂತರರಾದ ರಂಜಿತ್ ಕುಮಾರ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಹಿಂದಿನ ಲೇಖನಎಸ್‌ ಎಸ್‌ ಎಲ್‌ ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ
ಮುಂದಿನ ಲೇಖನಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಿ: ಅಂಜುಂ ಪರ್ವೆಜ್