ಮನೆ ಸುದ್ದಿ ಜಾಲ ಮೈಸೂರು: ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನದ ಜೈನ ಶಿಲ್ಪಗಳು ಪತ್ತೆ!

ಮೈಸೂರು: ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನದ ಜೈನ ಶಿಲ್ಪಗಳು ಪತ್ತೆ!

0

ಮೈಸೂರು: ಮೈಸೂರು ತಾಲೂಕಿನ ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನಕ್ಕೆ ಸೇರಿದ ಎರಡು ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.

ಕೈ ಹಾಗೂ ಕಾಲುಗಳಲ್ಲಿ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ .ಎನ್‌.ಎಸ್‌ ರಂಗರಾಜು, ಡಾ. ಶಶಿಧರ್‌, ಶ್ರೀ ಪ್ರಸನ್ನ ಕುಮಾರ್‌ ವಿನೋದ್‌ ಜೈನ್‌ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.

ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು. ಈ ಪ್ರದೇಶದಲ್ಲಿ ಹಲವಾರು ಶಿಲ್ಪಕಲೆಗಳಿವೆ ಎಂದು ರಂಗರಾಜು ಅವರು ಹೇಳಿದ್ದಾರೆ.

ಶಿಲ್ಪಗಳ ಮೇಲೆ ಮತ್ತಷ್ಟು ಬೆಳಕು ಚೆಲ್ಲುವ ಉತ್ಖನನದ ಯೋಜನೆಯನ್ನು ಸರ್ಕಾರ ಘೋಷಿಸಬೇಕು. ಉತ್ಖನನಕ್ಕೆ ಸಾಕಷ್ಟು ಅವಕಾಶವಿದ್ದು, ವರುಣಾ ಕ್ಷೇತ್ರವನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗುವುದು. ಇದು ಇತಿಹಾಸವನ್ನು ಸಂರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ಶಿಲ್ಪಗಳನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.