
ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದಲ್ಲಿ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಬೋಧನ ವೃತ್ತಿ ನಡೆಸಲು 5 ಉಪನ್ಯಾಸಕ, ಶಿಕ್ಷಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಮೈಸೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂ ಆಗಸ್ಟ್ 16 ಆಗಿದೆ.
ಮಹಾವಿದ್ಯಾಪೀಠದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬೋಧನ ವೃತ್ತಿಗೆ ಈ ಹುದ್ದೆಗಳ ಆಯ್ಕೆ ನಡೆಸಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಜೆಎಸ್ಎಸ್ ಮಹಾವಿದ್ಯಾಪೀಠ
ಹುದ್ದೆಯ ಹೆಸರು: ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಮೈಸೂರು
ವೇತನ: ಜೆಎಸ್ಎಸ್ ಮಹಾವಿದ್ಯಾಪೀಠದ ನಿಯಮಗಳ ಪ್ರಕಾರ
ಅನುಭವ
ಜ್ಯೀತಿಷ್ಯ ಶಾಸ್ತ್ರ ಉಪನ್ಯಾಸಕರು ಮತ್ತು ಸಂಸ್ಕೃತ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೋಧನಾ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ: ಆಫ್ಲೈನ್
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ
ಅರ್ಜಿ ಸಲ್ಲಿಕೆ ವಿಳಾಸ
ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, JSS ಮಹಾವಿದ್ಯಾಪೀಠ, ಡಾ. ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, ರಾಮಾನುಜ ರಸ್ತೆ, ಮೈಸೂರು – 570004
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಜುಲೈ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಆಗಸ್ಟ್ 2022
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಯಾವುದೇ ಅನುಭವವಿದ್ದರೆ ಇತ್ಯಾದಿ ಜೊತೆಗೆ ಎಲ್ಲಾ ಅಂಕಪಟ್ಟಿಗಳನ್ನು ದಾಖಲೆಗಳನ್ನು ಲಗತ್ತಿಸಿ
ಎಲ್ಲಾ ದಾಖಲೆಗಳನ್ನು ಮೇಲ್ಕಂಡ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸಲ್ಲಿಕೆಯಾಗುವಂತೆ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬಹುದಾಗಿದೆ.














