ಮೈಸೂರು: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಲಪಟಾಯಿಸಿದ್ದ ಖದೀಮನನ್ನ ಲಷ್ಕರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅರಕಲಗೂಡು ನಿವಾಸಿ ಪ್ರತಾಪ್(25) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.
ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಹರಿ ಜ್ಯೂಯಲರ್ಸ್ ನಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ಆರೋಪಿ ಗಮನ ಬೇರೆಡ ಸೆಳೆದು 40 ಗ್ರಾಂ ತೂಕದ ಎರಡು ಚಿನ್ನದ ಸರ ಕಳುವು ಮಾಡಿದ್ದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಈ ಸಂಬಂಧ ಶ್ರೀಹರಿ ಜ್ಯೂಯಲರ್ ಮಾಲೀಕರು ಲಷ್ಕರ್ ಠಾಣೆಗೆ ದೂರು ನೀಡಿದ್ದರು.
ಖದೀಮನ ಬಂಧನಕ್ಕೆ ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಮಾರ್ಗದರ್ಶನದಲ್ಲಿ ಹಾಗೂ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆಯ ಇನ್ಸ್ ಪೆಕ್ಟರ್ ಪ್ರಸಾದ್ ಹಾಗೂ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಗಣಗೇರಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಲೋಕೇಶ್, ಚೇತನ್,ಚಿನ್ನಪ್ಪ, ಮಂಜುನಾಥ್, ಲಾಳೇಸಾಬ್ ನಡಾಫ್, ಮಂಜುನಾಥ್ ಗದಗೈಗೋಳ, ಕುಮಾರ್ ರವರನ್ನೊಳಗೊಂಡ ತಂಡ ರಚಿಸಲಾಗಿತ್ತು.ಆರೋಪಿಯನ್ನ ಸೆರೆ ಹೊಡಿಯುವಲ್ಲಿ ತಂಡ ಯಶಸ್ವಿಯಾಗಿದೆ.
ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ..