ಮೈಸೂರು: ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್ ಒಡೆಯರ್ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ಸಿನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.
2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ಸಿನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ.