Saval TV on YouTube
ಮೈಸೂರು(Mysuru) : ಅಂತರಸಂತೆ ವನ್ಯಜೀವಿ ವಲಯದ ತಾರಕ ಶಾಖೆಯ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಎರಡು ಹುಲಿಗಳ ಮಧ್ಯೆ ಕಾದಾಟ ನಡೆದು ಗಂಡು ಹುಲಿಯೊಂದು ಮೃತಪಟ್ಟಿದೆ.
ಕಬಿನಿ ಹಿನ್ನೀರಿನಲ್ಲಿ ಬೇಟೆಗಾರರ ಉರಳಿಗೆ ಸಿಲುಕಿ ಸಾವನ್ನಪ್ಪಿದ ಹೆಣ್ಣು ಹುಲಿಯ ಮರಿಗಳು ಇತ್ತೀಚೆಗೆ ಕ್ಯಾಮರಾಗೆ ಸೆರೆ ಸಿಕ್ಕಿದವು ಅವುಗಳ ಚಲನವಲನವನ್ನು ಗಮನಿಸಲು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಹುಲಿ ಮೃತದೇಹ ಪತ್ತೆಯಾಗಿದೆ.
ಹುಲಿ ಕತ್ತು, ಭುಜದ ಮೇಲೆ ಗಾಯಗಳಾಗಿದ್ದು ಮತ್ತೊಂದು ಹುಲಿ ಜೊತೆ ಕಾದಾಡಿ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಖಚಿತಪಡಿಸಿದರು.
ಬಳಿಕ ಹುಲಿ ಕಳೇಬರವನ್ನ ಅರಣ್ಯಾಧಿಕಾರಿಗಳು, ಇತರ ಅಧಿಕಾರಿಗಳು ಮತ್ತು ಪಶು ವೈದ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.