ಮೈಸೂರು(Mysuru): ರಾಜ್ಯದ 10 ನಗರ ಪಾಲಿಕೆಗಳ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಮೇಯರ್ ಹಿಂದುಳಿದ ವರ್ಗಗಳ ಮಹಿಳೆಗೆ ಮೀಸಲಿರಿಸಲಾಗಿದೆ. ಮೀಸಲು ಪ್ರಕಟಿಸಿ ಟಿ.ಮಂಜುನಾಥ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
ಮೈಸೂರು ಹಾಲಿ ಮೇಯರ್ ಸುನಂದಾ ಪಾಲನೇತ್ರ ಅವಧಿ ಮುಗಿದು 5 ತಿಂಗಳು ಕಳೆದರೂ ಮೀಸಲಾತಿ ಪ್ರಕಟವಾಗಿರಲಿಲ್ಲ. ಹೀಗಾಗಿ ಹಂಗಾಮಿ ಮೇಯರ್ ಆಗಿ ಮುಂದುವರೆದಿದ್ದರು. ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಮೇಯರ್ ಆಗಿದ್ದರು.
ಸುನಂದಾ ಪಾಲನೇತ್ರ, ಮಾಜಿ ಸಿಎಂ ಬಿಎಸ್ ವೈ ಅವರ ದೂರದ ಸಂಬಂಧಿಯಾಗಿದ್ದಾರೆ. ಇದೀಗ ಮೇಯರ್ ಉಪಮೇಯರ್ ಸ್ಥಾನಕ್ಕೆ ಮೀಸಲು ಪ್ರಕಟವಾಗಿದ್ದು, ನಾಡಹಬ್ಬ ಮೈಸೂರು ದಸರಾ ವೇಳೆಗೆ ಹೊಸಮೇಯರ್ ಆಯ್ಕೆಯಾಗುವ ಸಾಧ್ಯತೆ ಇದೆ.