ಮನೆ ಸ್ಥಳೀಯ ಮೈಸೂರು ಮುಡಾ ಬಹುಕೋಟಿ ಹಗರಣ ಬೆನ್ನಲ್ಲೆ ಜಿಲ್ಲಾಧಿಕಾರಿ ವರ್ಗಾವಣೆ

ಮೈಸೂರು ಮುಡಾ ಬಹುಕೋಟಿ ಹಗರಣ ಬೆನ್ನಲ್ಲೆ ಜಿಲ್ಲಾಧಿಕಾರಿ ವರ್ಗಾವಣೆ

0

ಮೈಸೂರು:  ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಹೊರಬರುತ್ತಿದ್ದಂತೆಯೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

Join Our Whatsapp Group

ಅವರು 2022ರ ಅ.27ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ಹುದ್ದೆಯಿಂದ ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಇದು ಚರ್ಚೆಗೆ ಗ್ರಾಸವಾಗಿದೆ.

ಮುಡಾಕ್ಕೆ ಅಧ್ಯಕ್ಷರನ್ನು ನೇಮಿಸುವವರೆಗೆ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಆಗ, ‘ಪ್ರಾಧಿಕಾರದಲ್ಲಿ ಕಾನೂನು ಬಾಹಿರವಾಗಿ ಆಸ್ತಿಗಳನ್ನು ಹಂಚಿಕೆ ಮಾಡುತ್ತಿರುವ ಬಗ್ಗೆ ಆಯುಕ್ತರನ್ನು (ಆಗ ಜಿ.ಟಿ.ದಿನೇಶ್‌ಕುಮಾರ್‌ ಇದ್ದರು) ವಿಚಾರಣೆ ನಡೆಸಬೇಕು. ಅವರ ವಿರುದ್ಧ ಕೇಳಿಬಂದಿರುವ ಪ್ರತಿ ಆರೋಪಗಳನ್ನೂ ಪರಾಮರ್ಶಿಸಲು ಮತ್ತು ಉಂಟಾಗಿರುವ ನಷ್ಟದ ಸಂಬಂಧ ಕ್ರಮ ಕೈಗೊಳ್ಳಲು ಸರ್ಕಾರದ ಹಂತದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಅಭಿಪ್ರಾಯಿಸಿದೆ’ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಅಲ್ಲದೇ, ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದು ಕ್ರಮಕ್ಕೆ ಶಿಫಾರಸು ಮಾಡಿದ್ದರು.