ಮನೆ ಅಪರಾಧ ಮೈಸೂರು: ಪಿಎಫ್’ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಪೊಲೀಸರ ವಶಕ್ಕೆ

ಮೈಸೂರು: ಪಿಎಫ್’ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಪೊಲೀಸರ ವಶಕ್ಕೆ

0

ಮೈಸೂರು(Mysuru): ಗುಪ್ತಚರ ವರದಿ ಹಿನ್ನೆಲೆಯಲ್ಲಿ ನಗರದ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರಬಿದ್ದಿವೆ.

ಎನ್​ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಮತ್ತೊಬ್ಬ ಮೈಸೂರು ಜಿಲ್ಲಾ ಪಿಎಫ್ಐ ಮಾಜಿ ಕಾರ್ಯದರ್ಶಿ ಜಾಫರ್ ಷರೀಫ್ ಹಾಗೂ ಪಿಎಫ್ಐ ಸಕ್ರಿಯ ಕಾರ್ಯಕರ್ತ ಫೈರೋಜುಲ್ಲಾ ಷರೀಫ್ ಅವರನ್ನು ಮನೆಗಳಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.