ಮನೆ ಸುದ್ದಿ ಜಾಲ ಮೈಸೂರು: ಪೊಲೀಸ್ ಹುತಾತ್ಮರ ದಿನಾಚರಣೆ

ಮೈಸೂರು: ಪೊಲೀಸ್ ಹುತಾತ್ಮರ ದಿನಾಚರಣೆ

0

ಮೈಸೂರು(Mysuru): ಪೊಲೀಸ್ ಮಹಾನಿರೀಕ್ಷಕರು ದಕ್ಷಿಣ ವಲಯ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆ ಎಸ್ ಆರ್ ಪಿ ಪೊಲೀಸ್ ಘಟಕಗಳ ವತಿಯಿಂದ ಮೈಸೂರು ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದಲ್ಲಿರುವ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ  ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿ ಪ್ರಿಯಾ ಎಂ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮರಾದ ಧೈರ್ಯಶಾಲಿ ಪೊಲೀಸ್ ಸಿಬ್ಬಂದಿಯನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತೇವೆ. ಪೊಲೀಸ್ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತಾರೆ. ಅವರು ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಅವರಿಗೆ ಬಹಳ ಗೌರವ ನೀಡುವ ಕೆಲಸ ನಮ್ಮದಾಗಬೇಕು. ನಾಗರಿಕರಿಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸುವ ಮನೋಭಾವ ಬರಬೇಕು ಎಂದರು.

ಮೃತರ ಗೌರವಾರ್ಥ ಮೂರು ಸುತ್ತು  ಗಾಳಿ ಫೈರಿಂಗ್ ನಡೆಸಲಾಯಿತು.  ಈ ಸಂದರ್ಭ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ , ಡಿಸಿಪಿಗಳಾದ ಗೀತ ಪ್ರಸನ್ನ ಎಂ.ಎಸ್, ಪ್ರದೀಪ್ ಗುಂಟಿ ಮತ್ತಿತರರು ಉಪಸ್ಥಿತರಿದ್ದರು.