ಮನೆ ಶಿಕ್ಷಣ ಮೈಸೂರು: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

0

ಮೈಸೂರು: ಮೇ 20 ಮತ್ತು 21 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ರವರ ವತಿಯಿಂದ ನಗರದ 29 ಪರೀಕ್ಷಾ ಕೇಂದ್ರಗಳಲ್ಲಿ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.

Join Our Whatsapp Group

ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಪರೀಕ್ಷಾ ದಿನಗಳಂದು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ ರೀತ್ಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ನಗರದ ಪೊಲೀಸ್ ಆಯುಕ್ತಾರಾದ ರಮೇಶ್ ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಷೇಧಾಜ್ಞೆ ಜಾರಿಗೊಳಿಸಲಾದ ಕಾಲೇಜುಗಳು:

ಶಾರದ ವಿಳಾಸ ಪದವಿ ಪೂರ್ವ ಕಾಲೇಜು, ಸೆಂಟ್ ಫಿಲೋಮಿನ ಪದವಿಪೂರ್ವ ಕಾಲೇಜು ಬನ್ನಿಮಂಟಪ, ಡಿ ಬನುಮಯ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜು, ಟೆಲಿಶಿಯನ್ ಪದವಿ ಪೂರ್ವ ಕಾಲೇಜು ಸಿದ್ಧಾರ್ಥ ನಗರ, ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಪದವಿಪೂರ್ವ ಕಾಲೇಜು , ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಪದವಿಪೂರ್ವ ಕಾಲೇಜು , ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಮರಿಮಲ್ಲಪ್ಪ ಪದವಿಪೂರ್ವ ಕಾಲೇಜು ಹಾಗೂ ಎಸ್ ಬಿ ಆರ್ ಆರ್ ಮಹಾಜನ ಪದವಿ ಪೂರ್ವ ಕಾಲೇಜುಗಳ ಸುತ್ತಾ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದಿನ ಲೇಖನಪ್ರಮಾಣ ವಚನ ಸ್ವೀಕಾರ: ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ
ಮುಂದಿನ ಲೇಖನಗುರುರಾಯರ ನಂಬಿರೋ