ಮನೆ ಸುದ್ದಿ ಜಾಲ ಮೈಸೂರು: ಪಂಚಮಸಾಲಿ 2ಎ ಮೀಸಲಾತಿ ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಪಂಚಮಸಾಲಿ 2ಎ ಮೀಸಲಾತಿ ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ

0

ಮೈಸೂರು(Mysuru): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುವ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಹಿಂದುಳಿದ ವರ್ಗ ಹಾಗೂ ಕಾಯಕ ಸಮುದಾಯಗಳು ಪ್ರತಿಭಟಿಸಿದವು.

ನಗರದ ಕೋರ್ಟ್ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು ಸರ್ಕಾರ ಮತ್ತು ಮೀಸಲಾತಿಗೆ ಹೋರಾಟಕ್ಕಿಳಿದಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮುದಾಯ 2A ಗೆ ಸೇರ್ಪಡೆಯಾದರೆ ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುತ್ತಾರೆ. ಸಮಾಜದಲ್ಲಿ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಸರ್ಕಾರ ಪಂಚಮಸಾಲಿ ಸಮುದಾಯದ ಪ್ರಸ್ತಾವನೆ ತಿರಸ್ಕರಿಸಬೇಕು.ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಕ್ಕೆ ಪ್ರತಿಭಟನಾಕಾರರು ಖಡಕ್ ಎಚ್ಚರಿಕೆ ನೀಡಿದರು.

ಹಿಂದಿನ ಲೇಖನಬಾಕಿ ಪಾವತಿಗೆ ವಿಫಲ: ಖಾಸಗಿ ಯೋಜನೆಗೆ ನೀಡಿದ್ದ ಭೂಮಿ ಹಿಂಪಡೆದ ಕೆಐಎಡಿಬಿ ವಿರುದ್ಧದ ಮನವಿ ವಜಾಗೊಳಿಸಿದ ಹೈಕೋರ್ಟ್
ಮುಂದಿನ ಲೇಖನತಲೆಯಲ್ಲಿ ಇಣುಕುತ್ತಿರುವ ಬಿಳಿ ಕೂದಲಿಗೆ ಸಿಂಪಲ್ ಮನೆಮದ್ದುಗಳು