ಮೈಸೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಳಿಗ್ಗೆ ನಗರದ ಜೆಎಸ್ ಎಸ್ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಬೆಳಿಗ್ಗೆ 8.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದರು.
ಮೃತರು ಸಿದ್ದರಾಮನಹುಂಡಿಯಲ್ಲಿ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಮೂವರು ಹೆಣ್ಣು, ಒಂದು ಗಂಡುಮಗ ಇದ್ದಾರೆ. ಮಧ್ಯಾಹ್ನದ ನಂತರ, ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಕಳೆಗುಂದಿದ ಸಂಭ್ರಮ
ಸಿದ್ದರಾಮಯ್ಯ ಅವರ ಸ್ವಂತ ಬಾವನೇ ಮೃತಪಟ್ಟಿದ್ದರಿಂದ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಕಳೆಗುಂದಿತ್ತು. ಊರಿನಲ್ಲಿ ಸಂಭ್ರಮಾಚರಣೆ ಮಾಡದೇ, ಕುಟುಂಬದ ದುಃಖದಲ್ಲಿ ಭಾಗಿಯಾದರು.
Saval TV on YouTube