ಮನೆ ಕಾನೂನು ಮೈಸೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ-ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ-ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್

0

ಮೈಸೂರು: ಬಾಲಕಿ ಮೇಲೆ ಅತ್ಯಾಚಾರ  ಪ್ರಕರಣಕ್ಕೆ ಸಂಬಂಧಿಸಿದಂತೆ  ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, ₹ 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.

ಅಪರಾಧಿಯು ಬಿಹಾರ ಮೂಲದವನಾಗಿದ್ದು,  ವಿಶೇಷ ಕೋರ್ಟ್’​ನ ನ್ಯಾಯಾಧೀಶೆ ಶೈಮಾ ಕಮರೋಜ್ ಈ ತೀರ್ಪು ನೀಡಿದ್ದಾರೆ.

ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.

2021ರಲ್ಲಿ ಮೈಸೂರಿನ ಟಿ.ನರಸೀಪುರ ರಸ್ತೆಯ  ಫಾರಂಹೌಸ್ ನಲ್ಲಿ 10 ವರ್ಷದ ಬಾಲಕಿ ಮೇಲೆ ಆರೋಪಿಯು ನಿರಂತರ ಅತ್ಯಾಚಾರ ಎಸಗಿದ್ದ.

ಪ್ರಕರಣ ಕುರಿತು ಮೈಸೂರು ಗ್ರಾಮಾಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.