ಮನೆ ರಾಜ್ಯ ಮೈಸೂರು: ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ

ಮೈಸೂರು: ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ

0

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ-ಕೊಳ್ಳೆಗಾಲ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ  ಸಂಭವಿಸಿದ್ದ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

Join Our Whatsapp Group

ಖಾಸಗಿ ಬಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತಪಟ್ಟವರು ಬಳ್ಳಾರಿ ಮೂಲದವರು. ಪ್ರವಾಸಕ್ಕೆಂದು ಮೈಸೂರಿಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಹಿಂದಿನ ಲೇಖನಗಣೇಶ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಮುಂದಿನ ಲೇಖನಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ