ಮೈಸೂರು ಜಿಲ್ಲೆ: ಮೈಸೂರು ಜಿಲ್ಲೆಯಲ್ಲಿ ಭಾರೀ ಮನಕಲಕುವ ದುರಂತವೊಂದು ಇಂದು ಬೆಳಕಿಗೆ ಬಂದಿದೆ. ಹೆಚ್.ಡಿ. ಕೋಟೆ ತಾಲ್ಲೂಕಿನ ಬೂದನೂರಿನಲ್ಲಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರಾದವರು ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಹಾಗೂ ಮಗಳಾದ ಹರ್ಷಿತ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಬೂದನೂರು ಕೆರೆಯ ಹಂಚಿನಲ್ಲಿ ಮೂವರ ಚಪ್ಪಲಿ ಹಾಗೂ ಒಂದು ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಶಂಕೆ ಬಲವಾಗಿದ್ದು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಕೂಡಲೇ ಗಂಭೀರ ಹುಡುಕಾಟ ಕಾರ್ಯ ಆರಂಭಗೊಂಡಿದ್ದು, ತನಿಖೆ ಚುರುಕುಗೊಳಿಸಲಾಗಿದೆ.
ಆರಂಭಿಕ ಮಾಹಿತಿಯ ಪ್ರಕಾರ, ಮೃತ ಮಹದೇವಸ್ವಾಮಿ ಅವರ ಹಿರಿಯ ಮಗಳು ಅರ್ಪಿತ, ಯುವಕನೊಬ್ಬನನ್ನು ಪ್ರೀತಿಸಿ ಇತ್ತೀಚೆಗೆ ಮನೆ ಬಿಟ್ಟು ಹೋಗಿದ್ದಳು. ಈ ಘಟನೆ ಕುಟುಂಬದ ಮೇಲೆ ಭಾರೀ ಮಾನಸಿಕ ಹೊರೆ ತಂದಿತ್ತೆನ್ನಲಾಗಿದ್ದು, ಈ ಆತಂಕದಿಂದಾಗಿ ಕುಟುಂಬದ ಇತರ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಅನಿಸುತ್ತಿದೆ.
ಈ ಸಂಬಂಧ ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.















