ಮನೆ ಅಪರಾಧ ಮೈಸೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು

ಮೈಸೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು

0

ಮೈಸೂರು(Mysuru): ಕಾರೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಜಯಮ್ಮ (45) ಎಂಬುವವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದಡದಹಳ್ಳಿ ಸಮೀಪ ಭಾನುವಾರ ರಾತ್ರಿ ನಡೆದಿದೆ.

ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯವರಾದ ಅವರು ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿದ್ದ ಪಾತ್ರೆಗಳನ್ನು ತೆಗೆದುಕೊಂಡು ಹೋಗಲೆಂದು ರಸ್ತೆಬದಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿ.ನರಸೀಪುರ ತಾಲ್ಲೂಕಿನ ಹಿರಿಯೂರು ಸಮೀಪ ಶನಿವಾರ ತಡರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದ ಸಿದ್ದರಾಜು (31) ಎಂಬುವವರಿಗೆ ಸರಕು ಸಾಗಣೆ ವಾಹನವೊಂದು ಡಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಕ್ಕೂರಿನವರಾದ ಸಿದ್ದರಾಜು ಕೂಲಿ ಕೆಲಸ ಮಾಡುತ್ತಿದ್ದರು. ತಿ.ನರಸೀಪುರದಿಂದ ಗ್ರಾಮಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ. ಇವರಿಗೆ ಗುದ್ದಿದ ವಾಹನದ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಅಕ್ರಮ ಮದ್ಯ ಮಾರಾಟ: 20 ಕ್ಕೂ ಅಧಿಕ ಪ್ರಕರಣ ದಾಖಲು
ಮುಂದಿನ ಲೇಖನ10 ಲಕ್ಷ ‘ಆಶಾ’ ಕಾರ್ಯಕರ್ತೆಯರಿಗೆ WHO ಗೌರವ